ಕಾರ್ಕಳ : ಕುಕ್ಕುಂದೂರು ಗ್ರಾಮದ ನಕ್ರೆಜೆಡ್ಡು ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ನಕ್ರೆಜೆಡ್ಡು ರಾಜೇಶ್ ಪೂಜಾರಿ ಎಂಬವರ ಅಣ್ಣ ಉಮೇಶ್ ಕೋಟ್ಯಾನ್ ಅವರು ಈ ಹಿಂದೆ ಮುಂಬಯಿಯಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದು, ವ್ಯವಹಾರದಲ್ಲಿ ನಷ್ಟವಾಗಿ ಊರಿಗೆ ಬಂದು ನೆಲೆಸಿದ್ದರು.
ವಿಪರೀತ ಮದ್ಯಪಾನದ ಚಟ ಹೊಂದಿದ್ದ ಅವರು ಕರುಳಿನ ಮತ್ತು ಬಿಳಿ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದ್ದರು. ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗದ ಹಿನ್ನಲೆಯಲ್ಲಿ ಮನನೊಂದು ಏ. 4 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.





ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಬಳಿಕ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಏ.8 ರಂದು ಮೃತಪಟ್ಟಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



