ನೆಲ್ಯಾಡಿ : ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಹೊಸಮಜಲು ಗುಡ್ಡೆ ನಿವಾಸಿಯೊಬ್ಬರು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮಾರ್ಚ್ 15ರಂದು ನಡೆದಿದೆ.
ಮೃತರನ್ನು ಕೌಕ್ರಾಡಿ ಗ್ರಾಮದ ಹೊಸಮಜಲು ಗುಡ್ಡೆ ನಿವಾಸಿ ಮಥಾಯಿ ಅವರ ಪುತ್ರ ಜಿನ್ಸನ್ ಪಿ.ಎಂ. (38) ಎಂದು ಗುರುತಿಸಲಾಗಿದೆ.




ಮಾಹಿತಿಯ ಪ್ರಕಾರ, ಜಿನ್ಸನ್ ಅವರು ಮಂಗಳೂರು ಬರ್ಕೆಯ ಕೋಸ್ಟಲ್ ಗಾರ್ಡ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಅಲ್ಲಿ ವಾಸವಾಗಿದ್ದರು. ಮಾರ್ಚ್ 14ರಂದು ಮಧ್ಯಾಹ್ನ ಮನೆಯಿಂದ ಹೊರಟ ಅವರು, ಮಧ್ಯಾಹ್ನ 3 ಗಂಟೆ ವೇಳೆಗೆ ಪತ್ನಿಗೆ ಹಾಗೂ ಸಂಜೆ 6 ಗಂಟೆಗೆ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.



ನಂತರ ಉಡುಪಿಗೆ ತೆರಳಿ, ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸಮೀಪದ ವಸತಿ ಗೃಹದಲ್ಲಿ ಬಾಡಿಗೆ ಕೊಠಡಿ ಪಡೆದುಕೊಂಡಿದ್ದರು. ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.


