ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕಾರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಖಂಡಿಸುತ್ತದೆ.


ಕುಮಾರಿ ಭಾಗೀರಥಿ ಮುರುಳ್ಯ ಸುಳ್ಯದ ಕ್ರೀಯಾಶೀಲ ಹಾಗೂ ಜನಪ್ರಿಯ ಶಾಸಕರಾಗಿದ್ದು, ತನ್ನ ಪ್ರಾರಂಭದ ದಿನಗಳಿಂದಲೇ ನಿರಂತರವಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಓಡಾಡುತ್ತಾ ವಿರೋಧ ಪಕ್ಷದ ಸದಸ್ಯರಾಗಿದ್ದರು ಕೂಡ ಸಚಿವರುಗಳಿಗೆ ಮನವಿಯನ್ನು ಸಲ್ಲಿಸುತ್ತಾ ಸಾಕಷ್ಟು ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ತಂದುಕೊಟ್ಟ ಹೆಮ್ಮೆಯ ಶಾಸಕರಾಗಿದ್ದಾರೆ. ಮಾತ್ರವಲ್ಲದೇ ಕ್ಷೇತ್ರದ ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಒಡನಾಟವನ್ನು ಇಟ್ಟುಕೊಂಡ ಶಾಸಕರನ್ನು ಯಾವುದು ವೈಯುಕ್ತಿಕ ತೀಟೆ ಗೋಸ್ಕರ ದಲಿತ ಶಾಸಕಿಯನ್ನು ಹಾಗೂ ನಮ್ಮ ಪಾರ್ಟಿಯನ್ನು ಅವಮಾನಿಸುವ ಕೆಟ್ಟ ಪ್ರಯತ್ನವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಿದವರ ವಿರುದ್ಧ ದ.ಕ ಜಿಲ್ಲೆಯ ಪೊಲೀಸ್ ಮುಖ್ಯಸ್ಥರು ಕೂಡಲೇ ಕ್ರಮ ವಹಿಸಿ ಆತನನ್ನು ಬಂಧಿಸಿ ಜೈಲಿಗಟ್ಟುವ ಕೆಲಸ ಮಾಡಬೇಕೆಂದು ಮಂಡಲ ಬಿಜೆಪಿ ಯುವ ಮೋರ್ಚಾ ಆಗ್ರಹಿಸುತ್ತದೆ.



ತಕ್ಷಣ ಸೂಕ್ತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಬಿಜೆಪಿ ಸುಳ್ಯ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಜೊತೆಗೂಡಿಕೆಯಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಶ್ರೀಕಾಂತ್ ಮಾವಿನ ಕಟ್ಟೆ ತಿಳಿಸಿದ್ದಾರೆ.




