ಕಡಬದ ವಿದ್ಯಾನಗರದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸ್ವರೂಪ್ ಪಾಡ್ಲ (ಮೂರನೇ ತರಗತಿ) ಅವರು 2025ನೇ ಸಾಲಿನ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರಾಥಮಿಕ ವಿಭಾಗದ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸ್ಪರ್ಧೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಹಾರಡಿ ಇಲ್ಲಿ ನಡೆಸಲಾಯಿತು.




ವಿಜೇತನಾದ ಸ್ವರೂಪ್ ಪಾಡ್ಲಾ ಅವರು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪಾಡ್ಲ ನಿವಾಸಿಗಳಾದ ಶ್ರೀ ಬಾಲಕೃಷ್ಣ ಗೌಡ ಪಾಡ್ಲ (ಶ್ರೀ ದುರ್ಗಾ ಪವರ್ ಸಿಸ್ಟಂ, ಕಡಬ) ಹಾಗೂ ಶ್ರೀಮತಿ ಭವ್ಯ ಪಾಡ್ಲ ಅವರ ಪುತ್ರರಾಗಿದ್ದಾರೆ.
ಈ ಸಾಧನೆಗೆ ಸರಸ್ವತಿ ಸಮೂಹ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಎಂದು ಶುಭ ಹಾರೈಸಿದ್ದಾರೆ.




