ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ.




ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಿದ್ದಾರೆ.
ತ್ರಿಕೋನ ಕೇಸರಿ ಧ್ವಜವು ಸೂರ್ಯನ ಸಂಕೇತವನ್ನು ಹೊಂದಿದೆ. ಇದು ಶಾಶ್ವತ ಶಕ್ತಿ, ದೈವಿಕ ತೇಜಸ್ಸು, ಸದ್ಗುಣ ಮತ್ತು ಜ್ಞಾನೋದಯ ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಎಲ್ಲಾ ಗುಣಗಳನ್ನು ಪ್ರತಿನಿಧಿಸುತ್ತದೆ.



