ಮೂಡಿಗೆರೆ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9. ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕಿಶೋರ್ ಪಿ. ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *