ಪುತ್ತೂರು: ವಿಶ್ವ ಹಿಂದೂ ಪರಿಷದ್ – ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹವಾದ ಮೊತ್ತದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ರೇವತಿ ಅವರಿಗೆ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯಧನ ನೀಡಲಾಯಿತು.

ಈ ಸೇವಾ ಕಾರ್ಯಕ್ರಮದ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡದ ಕಾರ್ಯದರ್ಶಿ ಜಿತೇಶ್ ಬಲ್ನಾಡು ಹಾಗೂ ಪುತ್ತೂರು ನಗರ ಪ್ರಖಂಡದ ಬಜರಂಗದಳ ಸಂಯೋಜಕ ಜಯಂತ್ ಕುಂಜೂರುಪಂಜ ಉಪಸ್ಥಿತರಿದ್ದು, ಸೇವಾ ಮನೋಭಾವದ ಮಹತ್ವವನ್ನು ತಿಳಿಸಿದರು.

ಸಮಾಜದ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಉದ್ದೇಶದಿಂದ ವಜ್ರತೇಜಸ್ ಹಿಂದೂ ಕವಚ್ ಮೂಲಕ ನಿರಂತರವಾಗಿ ಇಂತಹ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದರು.

Leave a Reply

Your email address will not be published. Required fields are marked *