ಕಡಬ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ಇವರ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ ‘ವಿವೇಕ ವಿದ್ಯಾರ್ಥಿ’ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನವೆಂಬರ್ 9ರಂದು ನಡೆಯಿತು.

ಈ ಪರೀಕ್ಷೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಿಂಚನ ಅವರು ಜಿಲ್ಲಾಮಟ್ಟದಲ್ಲಿ ಮೂರನೇ ರ‍್ಯಾಂಕ್‌ ಪಡೆದು ಶಾಲೆಗೆ ಗೌರವ ತಂದಿದ್ದಾರೆ.
ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರಗಳನ್ನು ವಿತರಿಸಲಾಯಿತು. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *