ಪುತ್ತೂರು: ಗಂಡನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಖಾಸಗಿ ಕಾಲೇಜಿನ ಉಪನ್ಯಾಸಕಿಯೊಬ್ಬರು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಾಳು ಮಹಿಳೆಯು ನೀಡಿದ ಹೇಳಿಕೆಯಂತೆ, ‘ಮನೋಜ್’ ಎಂಬವರೊಂದಿಗೆ 16 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ 9ನೇ ತರಗತಿಯಲ್ಲಿ ಓದುತ್ತಿರುವ ಮಗನಿದ್ದಾನೆ. ಕಳೆದ ಕೆಲವು ವರ್ಷಗಳಿಂದ ಗಂಡ ನಿರಂತರ ಮಾನಸಿಕ ಕಿರುಕುಲ ನೀಡುತ್ತಿದ್ದುದಾಗಿ ಹಾಗೂ ಇತ್ತೀಚೆಗೆ ದೈಹಿಕ ಹಲ್ಲೆ ನಡೆಸಿರುವುದಾಗಿ ಅವರು ಆರೋಪಿಸಿದ್ದಾರೆ.

ಘಟನೆಯ ಸಂಬಂಧ ಮಹಿಳಾ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *