ಕಡಬ: ಕಡಬದಲ್ಲಿರುವ JMJ Hospital ನಲ್ಲಿ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಶಿಜಿ ಜಾರ್ಜ್ ಮಾತನಾಡಿ, ಸಮಾಜದ ಅಭಿವೃದ್ಧಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಹಿಳೆಯರು ನೀಡುತ್ತಿರುವ ಸೇವೆಯ ಮಹತ್ವವನ್ನು ವಿವರಿಸಿದರು. ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹಿಳೆಯರು ಮಹತ್ತರವಾದ ಪಾತ್ರ ವಹಿಸುತ್ತಿದ್ದು, ರೋಗಿಗಳ ಆರೈಕೆಯಲ್ಲಿ ಅವರ ಸೇವಾ ಮನೋಭಾವ ಮತ್ತು ಸಮರ್ಪಣೆ ಶ್ಲಾಘನೀಯವಾಗಿದೆ ಎಂದು ಹೇಳಿದರು.





ಮಹಿಳೆಯರಿಗೆ ಸಮಾಜದಲ್ಲಿ ಗೌರವ ಮತ್ತು ಸಮಾನ ಅವಕಾಶಗಳು ದೊರಕಬೇಕು ಎಂಬ ಸಂದೇಶವನ್ನು ಅವರು ನೀಡಿದರು.
ಈ ಸಂದರ್ಭದಲ್ಲಿ ಜೆಎಂಜೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದು, ಮಹಿಳಾ ದಿನಾಚರಣೆಯನ್ನು ಸಂತೋಷ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ಆಚರಿಸಲಾಯಿತು.



