ಪುತ್ತೂರು: ಕಾಂಗ್ರೆಸ್‌ನ ನೆಟ್ಟಣಿಗೆ ಮೂಡ್ನೂರು ವಲಯದ ಮಹಿಳಾ ಘಟಕದ ಸಭೆ ರವಿವಾರ ನಡೆಯಿತು. ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ, ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಿಡುಗಡೆಗೊಳಿಸಿರುವ ಅನುದಾನಗಳ ಬಗ್ಗೆ ಚರ್ಚಿಸಲಾಯಿತು.

ಶಾಸಕರ ಅವಧಿಯಲ್ಲಿ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಬೂತ್ ಅಧ್ಯಕ್ಷರ ನೇಮಕಾತಿ, ನರೇಗಾ ಹಕ್ಕೊತ್ತಾಯ ಪಾದಯಾತ್ರೆಯನ್ನು ಯಶಸ್ವಿಗೊಳಿಸುವ ವಿಚಾರಗಳು ಸಭೆಯ ಪ್ರಮುಖ ಅಂಶಗಳಾಗಿದ್ದವು. ಜೊತೆಗೆ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ನಗರ ಪಂಚಾಯತ್ ಚುನಾವಣೆಗೆ ಸೂಕ್ತ ಮಹಿಳಾ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಅನಿತಾ ಹೇಮನಾಥ್ ಶೆಟ್ಟಿ ಕಾವು, ಪುತ್ತೂರು ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಫೌಜಿಯಾ ಸೇರಿದಂತೆ ಕಾಂಗ್ರೆಸ್ ವಲಯಾಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ಸದಸ್ಯರು, ಕಾರ್ಯಕರ್ತರು ಹಾಗೂ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *