ಕಡಬ, ನ.11: ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25 ವರ್ಷ) ಎಂದು ಗುರುತಿಸಲಾಗಿದೆ.

ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, ಈ ನಡುವೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆತಂಕ ಉಂಟುಮಾಡಿದೆ.

ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಾರದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *